ಗುರುವಾರ, ಅಕ್ಟೋಬರ್ 22, 2020

IBPS notification

 



ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಆರ್ಆರ್ಬಿ 2020  ಕ್ಲರ್ಕ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.

IBPS ನಿಂದ ದೇಶದ ವಿವಿಧ ಬ್ಯಾಂಕುಗಳಲ್ಲಿಒಟ್ಟು 2557 ಕ್ಲರ್ಕ್ಹುದ್ದೆಗಳಿಗಳ ನೇಮಕಾತಿಗಾಗಿ ಆಹ್ವಾನಿಸಲಾಗಿದೆ.

 

ಓಟ್ಟು ಹುದ್ದೆಗಳು :   2557

Application start date: 23 Oct 2020

Application end date : 6 Nov 2020

 

ವಿದ್ಯಾರ್ಹತೆ ಏನಿರಬೇಕು: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು

 

ವಯೋಮಿತಿ: 1-9-2020 ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ


ಆಯ್ಕೆ ಪ್ರಕ್ರಿಯೆ: ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.


ಅರ್ಜಿ ಶುಲ್ಕದ ವಿವರ: ಅರ್ಜಿ ದಾರರು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 850/-ರೂ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕಿರುತ್ತದೆ.



ಅರ್ಜಿ ಸಲ್ಲಿಸುವುದು ಹೇಗೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅಕ್ಟೋಬರ್ 23 ರಿಂದ ನವೆಂಬರ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.


ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👉 Click here





 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ